ರಾಯಚೂರು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇಂದು ಕಂಗ್ರಾಜುಲೇಷನ್ಸ್ ಬ್ರದರ್ ಸಿನಿಮಾ ಟ್ರೈಲರ್ ಬಿಡುಗಡೆ ಮಾಡಲಾಯಿತು. ರಾಯಚೂರು ನಗರಕ್ಕೆ ಆಗಮಿಸಿದ ಚಿತ್ರತಂಡ ಕಾಲೇಜು ವಿದ್ಯಾರ್ಥಿಗಳಿಂದ ಟ್ರೈಲರ್ ಬಿಡುಗಡೆ ಮಾಡಿಸಬೇಕು ಎಂಬ ನಿಟ್ಟಿನಲ್ಲಿ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಆಗಮಿಸಿ, ಅಲ್ಲಿ ವಿದ್ಯಾರ್ಥಿಗಳು, ಸಾಮಾಜಿಕ ಹೋರಾಟಗಾರರು, ಪ್ರಾಚಾರ್ಯರು ಸಿಬ್ಬಂದಿಗಳು ಸೇರಿದಂತೆ ಹಲವರ ಸಮ್ಮುಖದಲ್ಲಿ ಈ ಒಂದು ಚಿತ್ರದ ಟ್ರೈಲರ್ ಬಿಡುಗಡೆ ಮಾಡಲಾಯಿತು.