ಬಳ್ಳಾರಿ: ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಮಿಂಚೇರಿ ಸರ್ಕಾರಿ ಶಾಲೆಯಲ್ಲಿ ತೆರದ ಮನೆ ಕಾರ್ಯಕ್ರಮ
ಸೆಪ್ಟಂಬರ್ 16, ಮಂಗಳವಾರ ಬೆಳಿಗ್ಗೆ 10:30 ಕ್ಕೆ ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಮಿಂಚೇರಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತೆರದ ಮನೆ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಮಕ್ಕಳ ಹಕ್ಕುಗಳು, ಸೈಬರ್ ಅಪರಾಧಗಳ ತಡೆ, ಸ್ವತ್ತಿನ ಅಪರಾಧಗಳ ವಿರುದ್ಧ ಜಾಗೃತಿ, ಹಾಗೆಯೇ ಮಹಿಳೆ ಮತ್ತು ಮಕ್ಕಳ ಮೇಲಿನ ಪ್ರಕರಣಗಳ ಬಗ್ಗೆ ಮುನ್ನೆಚ್ಚರಿಕಾ ಕ್ರಮಗಳು ಕುರಿತು ಮಾಹಿತಿ ನೀಡಲಾಯಿತು.ಪೊಲೀಸರು ಮಕ್ಕಳೊಂದಿಗೆ ನೇರವಾಗಿ ಸಂವಾದ ನಡೆಸಿ, ಅವರ ಪ್ರಶ್ನೆಗಳಿಗೆ ಉತ್ತರಿಸಿದರು. ವಿದ್ಯಾರ್ಥಿಗಳಲ್ಲಿ ಕಾನೂನು ಅರಿವು ಮೂಡಿಸುವ ಮೂಲಕ ಉತ್ತಮ ಭವಿಷ್ಯಕ್ಕಾಗಿ ಪೊಲೀಸ್ ಇಲಾಖೆ ಕಾರ್ಯನಿರ್ವಹಿಸುತ್ತಿದೆ ಎಂದು ಅಧಿಕಾರಿಗಳು ಹೇಳಿದರು.