ಜಗಳೂರು: ಸರ್ಕಾರ ರೈತರಿಗೆ ಬೆಳೆ ಪರಿಹಾರ, ಬೆಳೆ ವಿಮೆ ನೀಡಬೇಕು: ಪಟ್ಟಣದಲ್ಲಿ ರೈತಸಂಘ ಅಧ್ಯಕ್ಷ ಕೆ.ಬಸವರಾಜಪ್ಪ ಆಗ್ರಹ
ರಾಜ್ಯ ರೈತಸಂಘ ಮತ್ತು ಹಸಿರು ಸೇನೆ (ನಂಜುಂಡಸ್ವಾಮಿ ಬಣ) ವತಿಯಿಂದ ತಾಲ್ಲೂಕು ಮಟ್ಟದ ರೈತ ಪದಾಧಿಕಾರಿಗಳ ಸಭೆಯನ್ನು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಭಾನುವಾರ ಆಯೋಜಿಸಲಾಗಿತ್ತು. ಸಂಘದ ತಾಲೂಕು ಅಧ್ಯಕ್ಷ ಕೆ.ಬಸವರಾಜಪ್ಪ ಮಾತನಾಡಿ, ಬರಗಾಲ ಬಂದು ನಾಲ್ಕೈದು ತಿಂಗಳಾದರೂ ರೈತರಿಗೆ ಬೆಳೆ ಪರಿಹಾರ, ಬೆಳೆ ವಿಮೆ ನೀಡಿಲ್ಲ. ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ರೈತರಿಗೆ ಒಂದು ನಯಾ ಪೈಸೆ ಕೂಡ ನೀಡಿಲ್ಲ. ತಾಲೂಕಿನ ಬಹಳ ಹಳ್ಳಿಗಳಲ್ಲಿ ಕುಡಿಯುವ ನೀರು, ದನ ಕರುಗಳಿಗೆ ಮೇವು, ಉದ್ಯೋಗ ಖಾತ್ರಿ ಕೆಲಸ ಕೊಡಬೇಕು. ಕೆಲಸ ಮಾಡಿದ ಕೂಲಿಕಾರ್ಮಿಕರಿಗೆ ವಾರಕ್ಕೊಮ್ಮೆ ಕೂಲಿ ಹಣ ಪಾವತಿಸಬೇಕು ಎಂದು ಹೇಳಿದರು.