ಶ್ರೀರಂಗಪಟ್ಟಣ: ಕೆ.ಆರ್. ಸಾಗರದಲ್ಲಿ ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದ ಜಾಗ ತೆರವು
ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್. ಸಾಗರದಲ್ಲಿ ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದ ಜಾಗವನ್ನು ತೆರವುಗೊಳಿಸಿರುವ ಘಟನೆ ಜರುಗಿದೆ. ತಾಲೂಕಿನ ಕೆ.ಆರ್. ಸಾಗರದಲ್ಲಿ ಕಾವೇರಿ ನೀರಾವರಿ ಇಲಾಖೆಗೆ ಸೇರಿದ ವಸತಿ ಗೃಹ ಮತ್ತು 4 ಎಕರೆ ಜಾಗವನ್ನು ಖಾಸಗಿ ವ್ಯಕ್ತಿಯೊಬ್ಬರು ಒತ್ತುವರಿ ಮಾಡಿಕೊಂಡಿದ್ದರು. ಈ ಸಂಬಂಧ ನೀರಾವರಿ ನಿಗಮದ ಅಧಿಕಾರಿಗಳು ಜೆ.ಸಿ.ಬಿ. ಯಂತ್ರ ಬಳಸಿ ಒತ್ತುವರಿಯಾಗಿದ್ದ ಗಿಡಗಳು ಹಾಗೂ ಅಕ್ರಮ ಕಟ್ಟಡಗಳನ್ನು ತೆರವುಗೊಳಿಸಿದರು. ನಂತರ ಏಕಾಏಕಿ ನಡೆದ ಈ ಕಾಯರ್ಾಚರಣೆಯ ಸಹಾಯಕ ಅಭಿಯಂತರರು ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಕ್ರಮ ಕೈಗೊಂಡರು.