ಜೇವರ್ಗಿ: ಪಟ್ಟಣದಲ್ಲಿ ರೈತರ ಪರ ಬೇಡಿಕೆ ಈಡೇರಿಕೆಗಾಗಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆ
ಜೇವರ್ಗಿಯಲ್ಲಿ ಅತಿವೃಷ್ಟಿ-ಅನಾವೃಷ್ಟಿಯಿಂದ ಬೆಳೆ ಹಾನಿಗೊಳಗಾದ ರೈತರ ಪರವಾಗಿ ಬಿಜೆಪಿ ಮಂಡಲದ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ರದ್ದೇವಾಡಗಿ ಪೆಟ್ರೋಲ್ ಪಂಪ್ನಿಂದ ವಿಜಯಪುರ ವೃತ್ತದವರೆಗೆ ರಸ್ತೆ ತಡೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು. ಶಾಸಕ ಡಾ. ಅಜಯಸಿಂಗ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ರೈತರ ಸಂಕಷ್ಟ ಆಲಿಸಲು ಮುಂದಾಗಿಲ್ಲವೆಂದು ಪ್ರತಿಭಟನಾಕಾರರು ಕಿಡಿ ಕಾರಿದರು. ತಕ್ಷಣ ಬೆಳೆ ಹಾನಿ ಸಮೀಕ್ಷೆ ನಡೆಸಿ ತಲಾ ಎಕ್ಕರೆಗೆ 25 ಸಾವಿರ ಪರಿಹಾರ ನೀಡಬೇಕು ಹಾಗೂ ಬೆಳೆ ವಿಮೆ ಒದಗಿಸಬೇಕು ಎಂದು ಆಗ್ರಹಿಸಲಾಯಿತು. ಗುರುವಾರ 3 ಗಂಟೆಗೆ ಪ್ರತಿಭಟನೆ ನಡೆಸಲಾಯಿತು...