ಬಂಗಾರಪೇಟೆ: ಶುಲ್ಕ ಹೆಚ್ಚಳವನ್ನು ಕೈಬಿಡುವಂತೆ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ವತಿಯಿಂದ ಪಟ್ಟಣದಲ್ಲಿ ಪ್ರತಿಭಟನೆ
ಶುಲ್ಕ ಹೆಚ್ಚಳವನ್ನು ಕೈಬಿಡುವಂತೆ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ವತಿಯಿಂದ ಪಟ್ಟಣದಲ್ಲಿ ಪ್ರತಿಭಟನೆ ಬಂಗಾರಪೇಟೆ: ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಏಕಾಏಕಿ ಶುಲ್ಕ ದುಪ್ಪಟ್ಟು ಹೆಚ್ಚಳ ಮಾಡುವುದರ ಮೂಲಕ ಲೂಟಿ ಮಾಡಲು ಮುಂದಾಗಿದೆ ಎಂದು ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ತಾಲೂಕು ಅಧ್ಯಕ್ಷ ಮಯೂರ್ ಗುಡುಗಿದರು. ಪಟ್ಟಣದ ತಾಲೂಕು ಆಡಳಿತ ಕಛೇರಿಯ ಮುಂಭಾಗದಲ್ಲಿ ಬುಧವಾರ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ಶುಲ್ಕ ಹೆಚ್ಚಳವನ್ನು ಕೈಬಿಡುವಂತೆ ಕರೆಯಲಾಗಿದ ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿದ ಅವರು , ಬೆಂಗಳೂರು ವಿಶ್ವವಿದ್ಯಾಲಯದ ಶುಲ್ಕ ಹೆಚ್ಚಳ ಮಾಡುವುದರ ಮೂಲಕ ಬಡ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿದೆ ಇದರ ಹಿಂದೆ ಅಪಾರ