ಚಿತ್ರದುರ್ಗ: ದೇವಪುರದಹಟ್ಟಿಯಲ್ಲಿ ಪಿಕ್-ಅಪ್ ಕಾಲುವೆ ನಿರ್ಮಾಣಕ್ಕೆ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಚಾಲನೆ
ಚಿತ್ರದುರ್ಗ ತಾಲ್ಲೂಕಿನ ಹುಲ್ಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೇವಪುರದಹಟ್ಟಿಯಲ್ಲಿ ಪಿಕ್-ಅಪ್ ಕಾಲುವೆ ನಿರ್ಮಾಣ ಕಾಮಗಾರಿಗೆ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಚಾಲನೆ ನೀಡಿದರು. ಭೂಮಿಪೂಜೆ ನೆರವೇರಿಸಿದ ಅವರು, ಗ್ರಾಮಸ್ಥರಿಗೆ ಕಾಲುವೆಯ ಸದುಪಯೋಗ ಪಡೆದುಕೊಳ್ಳಲು ಸಲಹೆ ನೀಡಿದರು. ಈ ವೇಳೆ ಸ್ಥಳೀಯರು ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.