ಚಾಮರಾಜನಗರ: ವೆಂಕಟಯ್ಯನಛತ್ರದಲ್ಲಿ ದೀಪಾವಳಿ ಹಬ್ಬ ಹಿನ್ನೆಲೆ ಲಕ್ಷ ದೀಪೋತ್ಸವ
ಚಾಮರಾಜನಗರ ತಾಲೂಕಿನ ವೆಂಕಟಯ್ಯನ ಛತ್ರ ಗ್ರಾಮದಲ್ಲಿರುವ ಶ್ರೀ ಪ್ರಸನ್ನ ವೆಂಕಟರಮಣಸ್ವಾಮಿ ದೇವಸ್ಥಾನದಲ್ಲಿ ವಾಯುಪುತ್ರ ಸೇನಾ ಸಮಿತಿ ಹಾಗೂ ದೇವಸ್ಥಾನದ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಲಕ್ಷ ದೀಪೋತ್ಸವ ನಡೆಯಿತು. ದೇವಸ್ಥಾನ ಹಾಗೂ ಕಲ್ಯಾಣಿಯಲ್ಲಿ ದೀಪಗಳನ್ನು ಹಚ್ಚಿ ವಿಜೃಂಭಣೆಯಿಂದ ದೀಪೋತ್ಸವ ನಡೆಯಿತು.