ಧಾರವಾಡ : ರಾಜ್ಯಾದ್ಯಂತ ಪ್ರಸ್ತುತ ಬೀಸುತ್ತಿರುವ ತೀವ್ರ ಶೀತಗಾಳಿಯ ಹಿನ್ನೆಲೆಯಲ್ಲಿ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಅಗತ್ಯ ಮುನ್ನೆಚ್ಚರಿಕಾ ಮಾರ್ಗಸೂಚಿಗಳನ್ನು ಹೊರಡಿಸಿದೆ. ಶೀತಗಾಳಿಯಿಂದಾಗುವ ಆರೋಗ್ಯ ಸಮಸ್ಯೆಗಳು ಹಾಗೂ ಅಪಘಾತಗಳನ್ನು ತಡೆಯುವ ಉದ್ದೇಶದಿಂದ ಸಾರ್ವಜನಿಕರು ಈ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಸೂಚಿಸಿದ್ದಾರೆ.