ಕಾರವಾರ: ನಗರದ ತಾಪಂ ಕಚೇರಿಯಲ್ಲಿ ಕೆಡಿಪಿ ಸಭೆ ನಡೆಯಿತು
ಗುರುವಾರ ಸಂಜೆ 5ರವರೆಗೆ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ತಾಲೂಕು ಪಂಚಾಯತ್ ಕೆಡಿಪಿ ಸಭೆ ಆಡಳಿತಾಧಿಕಾರಿ ಸೋಮಶೇಖರ್ ಮೇಸ್ತಾ ಅಧ್ಯಕ್ಷತೆ ವಹಿಸಿ ನಡೆಯಿತು. 15 ನೇ ಹಣಕಾಸು ಯೋಜನೆಯಡಿ ತಾಲೂಕು ಪಂಚಾಯತ್ ವತಿಯಿಂದ ಬಿಡುಗಡೆಯಾದ ಅನುದಾನವನ್ನು ಎಲ್ಲಾ ಇಲಾಖೆಯವರು ಸಮರ್ಪಕವಾಗಿ ವಿನಿಯೋಗಿಸಿಕೊಂಡು ನಿಗಧಿತ ಅವಧಿಯಲ್ಲಿ ಕಾಮಗಾರಿಗಳನ್ನು ಮುಕ್ತಾಯಗೊಳಿಸಬೇಕು ಅನುದಾನ ಕಡಿಮೆ ಇದ್ದಲ್ಲಿ ತಾ.ಪಂ ಕಾರ್ಯನಿರ್ವಾಹಕ ಆಧಿಕಾರಿಗಳ ಗಮನಕ್ಕೆ ತರುವಂತೆ ಎಲ್ಲಾ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.