ಕಲಬುರಗಿ : ಟನ್ ಕಬ್ಬಿಗೆ 3165 ರೂ ದರ ನಿಗದಿ ಮಾಡಬೇಕು, ಹತ್ತಿ ಖರೀಧಿ ತೂಕದಲ್ಲಿ ಆಗ್ತಿರೋ ಮೋಸಕ್ಕೆ ಕಡಿವಾಣ ಹಾಕಬೇಕು, ಕಟಾವು ಮೊದಲೆ ತೊಗರಿ ಖರೀಧಿ ಕೇಂದ್ರ ಸ್ಥಾಪನೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದಿಂದ ನ24 ರಂದು ಮಧ್ಯಾನ 12 ಗಂಟೆಗೆ ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ಗಂವ್ಹಾರ್ ಗ್ರಾಮದ ಬಳಿ ಬೀದರ್-ಶ್ರೀರಂಗಪಟ್ಟಣ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದಾರೆ.. ಅತಿವೃಷ್ಟಿಯಿಂದ ಹಾಳಾದ ಬೆಳೆಗೆ ಸೂಕ್ತ ಪರಿಹಾರ ನೀಡಬೇಕು ಜೊತೆಗೆ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಿಸುವಂತೆ ಒತ್ತಾಯಿಸಿದ್ದಾರೆ..