ಕರ್ನಾಟಕ ಮಾಹಿತಿ ಆಯೋಗದ ಕಲಬುರಗಿ ಪೀಠದ ರಾಜ್ಯ ಮಾಹಿತಿ ಆಯುಕ್ತರಾದ ಬಿ.ವೆಂಕಟ್ ಸಿಂಗ್ ಅವರು ನವಂಬರ್ ತಿಂಗಳಲ್ಲಿ ರಾಯಚೂರು ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡಿದ್ದಾರೆ ಎಂದು ಆಯುಕ್ತರ ಆಪ್ತ ಸಹಾಯಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನವೆಂಬರ್ 01ರಂದು ಬೆಳಿಗ್ಗೆ 9 ಗಂಟೆಗೆ ನಗರದ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದಿಂದ ನಡೆಯುವ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ. ಅಂದು ರಾಯಚೂರಲ್ಲಿ ವಾಸ್ತವ್ಯ ಮಾಡುವರು ಎಂದು ಮಾಹಿತಿ ಲಭ್ಯವಾಗಿದೆ.