ಕೃಷ್ಣಾ ನದಿಯಲ್ಲಿ ಮಹೇಶವಾಡಗಿ ಬಳಿ ಪ್ರಸ್ತಾವಿತ ಬ್ಯಾರೇಜ್ ನಿರ್ಮಾಣ ಕಾಮಗಾರಿ ವಿಳಂಬದ ಹಿನ್ನೆಲೆಯಲ್ಲಿ ಬಾಗಲಕೋಟೆ ಜಿಲ್ಲೆಯ ರಬಕವಿ ನಗರದಲ್ಲಿ ಕಳೆದ 5 ದಿನಗಳಿಂದ ಹೋರಾಟಗಾರರು ಅಮರಣ ಉಪವಾಸ ಸತ್ಯಾಗ್ರಹ ಆರಂಭಿಸಿದರು.ಈ ಹಿನ್ನೆಲೆ ಅಬಕಾರಿ ಸಚಿವರು ಹಾಗೂ ಬಾಗಲಕೋಟ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ಅವರು ಸತ್ಯಾಗ್ರಹ ಸ್ಥಳಕ್ಕೆ ಭೇಟಿ ನೀಡಿದರು. ಹೋರಾಟಗಾರರೊಂದಿಗೆ ಚರ್ಚೆ ನಡೆಸಿ, ಬ್ಯಾರೇಜ್ ಕಾಮಗಾರಿಯನ್ನು ಶೀಘ್ರದಲ್ಲೇ ಆರಂಭಿಸಲಾಗುವುದು ಎಂದು ಭರವಸೆ ನೀಡಿದರು. ನಂತರ ಸ್ವತಃ ಸಚಿವರು ಎಳೆನೀರು ಕುಡಿಸುವ ಮೂಲಕ ಉಪವಾಸ ಸತ್ಯಾಗ್ರಹವನ್ನು ಮುಕ್ತಗೊಳಿಸಿದರು.