ಹೊಸನಗರ: ಬೈಕ್ ಕಳ್ಳನನ್ನ ಬಂಧಿಸಿದ ರಿಪ್ಪನ್ ಪೇಟೆ ಪೊಲೀಸರು, ಬೈಕ್ ವಶ
ಹೊಸನಗರ ತಾಲೂಕಿನ ರಿಪ್ಪನ್ಪೇಟೆ ಪಟ್ಟಣದಲ್ಲಿ ನಡೆದ ಬೈಕ್ ಕಳ್ಳತನ ಪ್ರಕರಣವನ್ನು ಪೊಲೀಸರು ಕೆಲವೇ ದಿನಗಳಲ್ಲಿ ಭೇದಿಸಿ ಆರೋಪಿಯನ್ನು ವಶಕ್ಕೆ ಪಡೆದು ದ್ವಿಚಕ್ರ ವಾಹನವನ್ನು ಮಂಗಳವಾರ ಸಂಜೆ 6:20 ಕ್ಕೆ ವಶಪಡಿಸಿಕೊಂಡಿದ್ದಾರೆ. ಅಕ್ಟೋಬರ್ 19ರ ಭಾನುವಾರ ಮಧ್ಯಾಹ್ನ 12.30ರ ಸುಮಾರಿಗೆ ಕಣಬಂದೂರಿನ ವ್ಯಕ್ತಿಯೊಬ್ಬರು ಸತ್ಕಾರ ಲಾಡ್ಜ್ ಮುಂಭಾಗ, ರಾಧಾಕೃಷ್ಣ ಜ್ಯೂವೆಲರಿ ಪಕ್ಕದಲ್ಲಿ ಬೈಕ್ ನಿಲ್ಲಿಸಿದ್ದರು. ಸ್ವಲ್ಪ ಹೊತ್ತಿನ ನಂತರ ಮರಳಿ ಬಂದು ನೋಡಿದಾಗ ಬೈಕ್ ಕಾಣೆಯಾಗಿದ್ದು, ಎಲ್ಲೆಡೆ ಹುಡುಕಾಡಿದರೂ ಪತ್ತೆಯಾಗದೆ ತಡವಾಗಿ ಠಾಣೆಗೆ ದೂರು ನೀಡಲಾಗಿತ್ತು.