ಶಿರಸಿ: ನಗರದ ದೀನದಯಾಳ್ ಭವನದಲ್ಲಿ ತುರ್ತು ಪರಿಸ್ಥಿತಿ ಹೇರಿದ ಕಾಂಗ್ರೆಸ್ ಕರಾಳ ಇತಿಹಾಸಕ್ಕೆ 50 ವರ್ಷ ಕಾರ್ಯಕ್ರಮ
ಶಿರಸಿ ನಗರದ ದೀನದಯಾಳ್ ಭವನದಲ್ಲಿ ತುರ್ತು ಪರಿಸ್ಥಿತಿ ಹೇರಿದ ಕಾಂಗ್ರೆಸ್ ಕರಾಳ ಇತಿಹಾಸಕ್ಕೆ 50 ವರ್ಷ ಕಾರ್ಯಕ್ರಮ ಬುಧವಾರ ಮಧ್ಯಾಹ್ನ 3ಕ್ಕೆ ಕಾರ್ಯಕ್ರಮವನ್ನು ರಾಜ್ಯ ಬಿಜೆಪಿಯ ಶಿಸ್ತು ಸಮಿತಿ ಅಧಕ್ಷ ಲಿಂಗರಾಜ್ ಪಾಟೀಲ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿ ಸಂವಿಧಾನ ರಚನೆ ಆದಾಗಿನಿಂದ ಕಾಂಗ್ರೆಸ್ ಅಧಿಕಾರ ದುರುಪಯೋಗ ಪಡಿಸಿಕೊಂಡಿದೆ. ನೆಹರೂ ಕಾಲದಿಂದ ಇಲ್ಲಿಯ ತನಕ ಕಾಂಗ್ರೆಸ್ ಅಧಿಕಾರ ನಡೆಸಿದ್ದರೂ ಪ್ರತಿ ಬಾರಿ ತಮ್ಮ ಸ್ವಾರ್ಥಕ್ಕೆ ಉಪಯೋಗಿಸಿಕೊಂಡಿದೆ ಎಂದರು. ದೇಶದ ಇತಿಹಾಸದಲ್ಲಿ ಅಂದಿನ ಪ್ರಧಾನಿ ಇಂದಿರಾ ಗಾಂಧಿ ಜನರ ಮೇಲೆ ಹೇರಿದ ತುರ್ತು ಪರಿಸ್ಥಿತಿ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಒಂದು ಕಪ್ಪು ಚುಕ್ಕೆಯಾಗಿ ಉಳಿದಿದೆ ಎಂದರು.