ದೇವನಹಳ್ಳಿ: ವಕ್ಫ್ ಬೋರ್ಡ್ ವಿಚಾರ ಪಟ್ಟಣದಲ್ಲಿ ಭಾರತೀಯ ಕಿಸಾನ್ ಸಂಘದ ಮುಖಂಡರಿಂದ ಸುದ್ದಿಗೋಷ್ಠಿ
ವಕ್ಪ್ ಬೋರ್ಡ್ ವಿಚಾರವಾಗಿ ಕೇಂದ್ರ ಸರ್ಕಾರ ಸೂಕ್ತ ನಿರ್ಧಾರವನ್ನು ಕೈಗೊಂಡಿದೆ ಎಂದು ಭಾರತೀಯ ಕಿಸಾನ್ ಸಂಘ ಇಂದು ದೇವನಹಳ್ಳಿ ಪಟ್ಟಣದಲ್ಲಿ ಸುದ್ದಿಗೋಷ್ಠಿ ನಡೆಸಿ ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದ್ದಾರೆ. ಏಪ್ರಿಲ್ 25 ಶುಕ್ರವಾರ ಮದ್ಯಾನ್ಹಾ 2 ಗಂಟೆ ಸಮಯದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಭಾರತೀಯ ಕಿಸಾನ್ ಸಂಘದ ಮುಖಂಡರು, ದೇಶದಲ್ಲಿ ವಕ್ಫ್ ಬೋರ್ಡ್ ಹೆಸರಿನಲ್ಲಿ ಲಕ್ಷಾಂತರ ಹೆಕ್ಟರ್ ಭೂಮಿ ಅಕ್ರಮವಾಗಿದೆ. ಬೆಂಗಳೂರು ಗ್ರಾಮಾಂತರ ಸೇರಿದಂತೆ ಚಿಕ್ಕಬಳ್ಳಾಪುರ ಭಾಗದಲ್ಲಿಯೂ ವಕ್ಫ್ ಬೋರ್ಡ್ ಹೆಸರಿನಲ್ಲಿ ಸಾಕಷ್ಟು ಭೂಮಿಗಳು ಸೇರಿಕೊಂಡಿದೆ. ಸಂವಿಧಾನದ ಪ್ರಕಾರ ಎಲ್ಲಾ ಧರ್ಮಗಳಿಗೂ ಒಂದೆ ನ್ಯಾಯ ಇರುವಂತೆ ಮಾಡಲು ಕೇಂದ್ರ ಸರ್ಕಾರ ಮುಂದಾಗುತ್ತಿತ್ತು ಇದಕ್ಕೆ ನಮ್ಮ ಸಂಘಟನೆಯ ಬೆಂಬಲ ಇದೆ ಎಂದು ಮಾಹ