ಶಿವಮೊಗ್ಗ: ತೀರ್ಥಹಳ್ಳಿಯ ಕುರುವಳ್ಳಿ-ಬಾಳೆಬೈಲು ಬೈಪಾಸ್ ರಸ್ತೆಯಲ್ಲಿ ಧರೆ ಕುಸಿತ, ವಾಹನ ಸಂಚಾರ ಅಸ್ತವ್ಯಸ್ತ
ಶಿವಮೊಗ್ಗ ಜಿಲ್ಲೆಯಲ್ಲಿ ಸುರಿಯುತ್ತಿರುವಾ ಧಾರಾಕಾರ ಮಳೆಯಿಂದಾಗಿ ತೀರ್ಥಹಳ್ಳಿ ತಾಲೂಕಿನ ರಾಷ್ಟ್ರೀಯ ಹೆದ್ದಾರಿ ಕುರುವಳ್ಳಿ-ಬಾಳೆಬೈಲು ಬೈಪಾಸ್ ರಸ್ತೆಯಲ್ಲಿ ಧರೆ ಕುಸಿದಿದ್ದು ವಾಹನಗಳ ಓಡಾಟಕ್ಕೆ ತೊಂದರೆ ಉಂಟಾಗಿದೆ. ಸೋಮವಾರ ತೀರ್ಥಹಳ್ಳಿಯ ರಾಷ್ಟ್ರೀಯ ಹೆದ್ದಾರಿ ಕುರುವಳ್ಳಿ- ಬಾಳೆಬೈಲು ಬೈಪಾಸ್ ರಸ್ತೆಯಲ್ಲಿ ಧರೆ ಕುಸಿದ ಪರಿಣಾಮ ಸಂಬಂಧಪಟ್ಟ ಅಧಿಕಾರಿಗಳು ಮಣ್ಣು ತೆರವು ಕಾರ್ಯಾಚರಣೆ ಮಾಡುತ್ತಿದ್ದಾರೆ. ತಾಲೂಕಿನಲ್ಲಿ ವಿಪರೀತ ಮಳೆಯಾಗುತ್ತಿದ್ದು, ಮತ್ತಷ್ಟು ಮಣ್ಣು ಕುಸಿಯುವ ಭೀತಿ ಎದುರಾಗಿದೆ.