ಹನೂರು ತಾಲೂಕಿನ ಮಹದೇಶ್ವರಬೆಟ್ಟದ ನಾಗಮಲೆ ರಸ್ತೆಯಲ್ಲಿ ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ಮಹಿಳೆಯನ್ನು ಮಹದೇಶ್ವರಬೆಟ್ಟಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿಯನ್ನು ಕಿರನಹೊಲ ಗ್ರಾಮದ ಭಾಗ್ಯ (38) ಎಂದು ಗುರುತಿಸಲಾಗಿದೆ. ಗಾಂಜಾ ಸಾಗಾಟದಕುರಿತು ಖಚಿತ ಮಾಹಿತಿ ಮೇರೆಗೆ ಮಹದೇಶ್ವರಬೆಟ್ಟ ಪೊಲೀಸ್ ಇನ್ಸ್ಪೆಕ್ಟರ್ ಜಗದೀಶ್ ಅವರ ನೇತೃತ್ವದಲ್ಲಿ ತಂಡವು ನಾಗಮಲೆ ರಸ್ತೆ ಬಳಿ ದಾಳಿ ನಡೆಸಿತು.ದಾಳಿ ವೇಳೆ ಮಹಿಳೆಯ ಬಳಿ ಅಕ್ರಮವಾಗಿ ಗಾಂಜಾ ಇರುವುದನ್ನು ಪತ್ತೆಹಚ್ಚಲಾಗಿದ್ದು, ತಕ್ಷಣವೇ ಆಕೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಆರೋಪಿಯಿಂದ ಸುಮಾರು 237 ಗ್ರಾಂ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ