ಬಳ್ಳಾರಿ: ಬೆಳಕಿನ ಹಬ್ಬ ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ನಗರದಲ್ಲಿ ಪಟಾಕಿ,ಹೂವು, ಹಣ್ಣುಗಳ ವ್ಯಾಪಾರ ಜೋರು
ಬೆಳಕಿನ ಹಬ್ಬ ದೀಪಾವಳಿ ಆಚರಣೆಗೆ ನಗರ ಸೇರಿದಂತೆ ಜಿಲ್ಲಾದ್ಯಂತ ಬಿರುಸಿನ ಸಿದ್ಧತೆ ನಡೆದಿವೆ. ಭಾನುವಾರ ಬೆಳಿಗ್ಗೆ 10ಗಂಟೆಗೆ ಮಾರುಕಟ್ಟೆಯಲ್ಲಿ ಹೊಸ ಬಟ್ಟೆ, ಹೂ, ಹಣ್ಣು, ಪಟಾಕಿ ಸೇರಿ ಇತರೆ ವಸ್ತುಗಳ ಖರೀದಿ ಭರಾಟೆ ಜೋರಾಗಿ ಸಾಗಿದೆ. ಪಟಾಕಿ ಕೊಳ್ಳಲು ಜನರು ತಂಡೋಪತಂಡವಾಗಿ ಬರುತ್ತಿದ್ದ ದೃಶ್ಯ ನಗರದ ಐಟಿಐ ಕಾಲೇಜು ಮೈದಾನದಲ್ಲಿ ಕಂಡುಬಂತು. ಮೈದಾನದಲ್ಲಿ ಹಾಕಿದ್ದ 20 ಮಳಿಗೆಗಳಲ್ಲೂ ಜನರು ಸಡಗರದಿಂದ ಪಟಾಕಿ ಖರೀದಿಯಲ್ಲಿ ತೊಡಗಿದ್ದರು. ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ಆದಾಗ್ಯೂ ಖರೀದಿ ಪ್ರಮಾಣ ಕಡಿಮೆಯಾಗಿಲ್ಲ. ನಗರದ ಎ.ಪಿ.ಎಂ.ಸಿ. ಮಾರುಕಟ್ಟೆ, ಬೆಂಗಳೂರು ರಸ್ತೆ , ಕನಕ ದುರ್ಗಮ್ಮ ದೇವಸ್ಥಾನ ಬಳಿ ,ಹೂವಿನ ಮಾರುಕಟ್ಟೆ, ಕೌಲ್ ಬಜಾರ, ಗಾಂಧಿನಗರ ಮಾರುಕಟ್ಟೆಯಲ್ಲಿ ಜನ ಪೂಜಾ ಸಾಮಗ್ರಿ