ಶಿವಮೊಗ್ಗ: ಒಡಲಮನೆ ಗ್ರಾಮದ ಮನೆಯೊಂದರ ಗೋಡೆ ಕುಸಿತ
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಒಡಲಮನೆ ಗ್ರಾಮದ ಮನೆಯೊಂದರಲ್ಲಿ ಗೋಡೆ ಕುಸಿದಿದೆ. ಹೌದು ಮಲೆನಾಡಿನಲ್ಲಿ ಬೆಂಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ತೀರ್ಥಹಳ್ಳಿ ತಾಲೂಕಿನ ಒಡಲ ಮನೆ ಗ್ರಾಮದ ನಿವಾಸಿ ಹನುಮಮ್ಮ ಎಂಬುವರ ಮನೆಗೆ ಹಾನಿಯಾಗಿದೆ. ವಿಶ್ರಾಂತಿ ಕೂಡಲೇ ಸ್ಥಳಕ್ಕೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಆಗಮಿಸಿದ್ದು ಪರಿಶೀಲನೆ ನಡೆಸಿದ್ದಾರೆ ಅಲ್ಲದೆ ಸೂಕ್ತ ಪರಿಹಾರ ಒದಗಿಸುವ ಭರವಸೆಯನ್ನು ಹನುಮಮ್ಮ ಅವರಿಗೆ ನೀಡಿದ್ದಾರೆ.