ಶಿವಮೊಗ್ಗ: ತೀರ್ಥಹಳ್ಳಿಯ ಕುರುವಳ್ಳಿ ಬಾಳೆಬೈಲಿನ ರಾಷ್ಟ್ರೀಯ ಹೆದ್ದಾರಿಯ ತುಂಗಾ ಸೇತುವೆ ಬೈಪಾಸ್ ರಸ್ತೆ ತಡೆಗೋಡೆ ಕುಸಿತ
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಕುರುಬಳ್ಳಿ ಬಾಳೆಬೈಲಿನ ರಾಷ್ಟ್ರೀಯ ಹೆದ್ದಾರಿ 169 ಎ ಮಾರ್ಗದಲ್ಲಿ ನಿರ್ಮಿಸಿರುವ 56 ಕೋಟಿ ರೂಪಾಯಿ ವೆಚ್ಚದ ತುಂಗಾ ಸೇತುವೆಯ ಬೈಪಾಸ್ ರಸ್ತೆಯ ತಡೆಗೋಡೆಗಳು ಮಂಗಳವಾರ ಸಂಜೆ ಕುಸಿದು ಬಿದ್ದಿದೆ 56 ಕೋಟಿ ವೆಚ್ಚದಲ್ಲಿ ಹೊಸ ತುಂಗಾ ಸೇತುವೆ ಹಾಗೂ ಬೈಪಾಸ್ ರಸ್ತೆ ನಿರ್ಮಿಸಲಾಗಿತ್ತು. ಉದ್ಘಾಟನೆಗೊಂಡು ಕೆಲವೇ ತಿಂಗಳ ಒಳಗೆ ತಡಗೋಡೆ ಬಿದ್ದು, ಮಣ್ಣು ಕುಸಿಯುತ್ತಿದೆ. ಈಗಾಗಲೇ ವಾಹನ ಹೋರಾಟವನ್ನು ನಿರ್ಬಂಧಿಸಲಾಗಿದ್ದು ಸ್ಥಳದಲ್ಲೇ ಡಿವೈಎಸ್ಪಿ ಗಜಾನನ ವಾಮನಸುತರ ಎಸ್ಐ ಶಿವನಗೌಡ ಹಾಗೂ ಇತರೆ ಪೊಲೀಸ್ ಸಿಬ್ಬಂದಿಗಳು ಸ್ಥಳದಲ್ಲೇ ಮೊಕ್ಕಂ ಹೂಡಿದ್ದಾರೆ.