ಬೆಂಗಳೂರು ಉತ್ತರ: ಹೆರೋಹಳ್ಳಿಯಲ್ಲಿ ಹಕ್ಕು ಪತ್ರ ಕೊಡಿಸುವಂತೆ ಗ್ರಾಮಸ್ಥರ ಮನವಿ, ಶಾಸಕ ಸೋಮಶೇಖರ್ ರವರಿಗೆ ಕರೆಕಲ್ಲು ಗ್ರಾಮಸ್ಥರಿಂದ ಒತ್ತಾಯ
ಯಶವಂತಪುರ ವಿಧಾನಸಭಾ ಕ್ಷೇತ್ರದ ಹೇರೋಹಳ್ಳಿ ಗ್ರಾಮದಲ್ಲಿ ಹಕ್ಕುಪತ್ರ ನೀಡುವಂತೆ ಶಾಸಕರಿಗೆ ಗ್ರಾಮಸ್ಥರು ಮನವಿ ಪತ್ರ ಸಲ್ಲಿಸಿದರು. ಕರೆಕಲ್ಲು ಗ್ರಾಮದಲ್ಲಿ ಸರ್ಕಾರಿ ಜಾಗದಲ್ಲಿ ಮನೆಗಳನ್ನು ಕಟ್ಟಿಕೊಂಡು ವಾಸ ಮಾಡುತ್ತಿರುವ ಗ್ರಾಮಸ್ಥರು 94 ಸಿ ಅಡಿಯಲ್ಲಿ ಹಕ್ಕು ಪತ್ರ ಕೊಡಿಸುವಂತೆ ಶಾಸಕರಿಗೆ ಮನವಿ ಸಲ್ಲಿಸಿದರು. ಸುಮಾರು 30 ವರ್ಷಗಳಿಂದ ಸರ್ಕಾರಿ ಜಾಗದಲ್ಲಿ ಇವರು ವಾಸ ಮಾಡುತ್ತಿದ್ದು ಸರ್ಕಾರಕ್ಕೆ ಅಕ್ರಮ ಸಕ್ರಮ ಅಡಿಯಲ್ಲಿ ಜಾಗ ನೀಡುವಂತೆ ಅರ್ಜಿ ಸಲ್ಲಿಸಲಾಗಿದೆ. ಹೀಗಾಗಿ ಗ್ರಾಮಸ್ಥರು ಇಂದು ಶಾಸಕರನ್ನ ಭೇಟಿ ಮಾಡಿ ಸರ್ಕಾರದಿಂದ ಹಕ್ಕು ಪತ್ರ ಕೊಡಿಸುವಂತೆ ಒತ್ತಾಯಿಸಿದ್ದಾರೆ.