ಬೆಂಗಳೂರು ಉತ್ತರ: ನಾಳೆಯಿಂದ ಬೆಂಗಳೂರಿನಲ್ಲಿ 3 ದಿನ ಕಾವೇರಿ ನೀರು ಬರಲ್ಲ – ಜಲಮಂಡಳಿ ಮಾಹಿತಿ
ನಿಯಮಿತ ತುರ್ತು ನಿರ್ವಹಣಾ ಕಾಮಗಾರಿಗಳನ್ನು ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಸೆ.15, 16 ಮತ್ತು 17 ರಂದು ಕಾವೇರಿ ನೀರು ಸರಬರಾಜನ್ನು ಸ್ಥಗಿತಗೊಳಿಸಲಾಗುತ್ತಿದೆ ಎಂದು ಬೆಂಗಳೂರು ಜಲಮಂಡಳಿ ಅಧ್ಯಕ್ಷ ಡಾ.ವಿ.ರಾಮ್ ಪ್ರಸಾತ್ ಮನೋಹರ್ ತಿಳಿಸಿದ್ದಾರೆ. ಕಾವೇರಿ ನೀರು ಸರಬರಾಜು ಯೋಜನೆಯ ವಿವಿಧ ಹಂತಗಳ ಜಲರೇಚಕ ಯಂತ್ರಾಗಾರಗಳನ್ನು ಸೆ.15, 16 ಮತ್ತು 17 ರಂದು ಸ್ಥಗಿತಗೊಳಿಸಲಾಗುತ್ತಿದೆ. ಈ ಜಲರೇಚಕ ಯಂತ್ರಗಾರಗಳ ಸ್ಥಗಿತತೆಯಿಂದ ಕಾವೇರಿ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಆ ಮೂರು ದಿನಗಳಲ್ಲಿ ಸಂಚಾರಿ ಕಾವೇರಿಯ ಯೋಜನೆಯ ಟ್ಯಾಂಕರ್ಗಳ ಮೂಲಕ ನೀರು ಸರಬರಾಜು ಸೇವೆಯನ್ನು ಸ್ಥಗಿತಗೊಳಿಸಿ, ಈ ಟ್ಯಾಂಕರ್ಗಳನ್ನು ತುರ್ತು ನೀರು ಸರಬರಾಜಿಗಾಗಿ ಬಳಸಿಕೊಳ್ಳಲಾಗುವುದು ಎಂದಿದ್ದಾರೆ.