ನಂಜನಗೂಡು: ಕಳಲೆ ಗ್ರಾಮದ ಗೇಟ್ ಬಳಿ ಕಾಂಗ್ರೆಸ್ ಪಕ್ಷದ ಪ್ರಚಾರ ಸಮಾವೇಶದಲ್ಲಿ ಕುರ್ಚಿಗಾಗಿ ಕಿತ್ತಾಟ; ಕೆಕೆ ಹಾಕಿದ ಕಾರ್ಯಕರ್ತರು
ನಂಜನಗೂಡು : ನೆನ್ನೆ ನಂಜನಗೂಡು ತಾಲ್ಲೂಕಿನ ಕಳಲೆ ಗೇಟ್ ಸಮೀಪದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಬೃಹತ್ ಪ್ರಚಾರ ಸಮಾವೇಶ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು ಕಾರ್ಯಕ್ರಮದಲ್ಲಿ ಕುರ್ಚಿಗಾಗಿ ಕಿತ್ತಾಟ ಮಾಡಿಕೊಂಡಿರುವುದು ನಡೆದಿದೆ. ಇಂದು ಶನಿವಾರ ಮಧ್ಯಾಹ್ನ 1 ಗಂಟೆಯ ಸಮಯದಲ್ಲಿ ಈ ವರದಿಯನ್ನು ಮಾಡಲಾಗಿದೆ. ಚಾಮರಾಜನಗರ ಲೋಕಸಭಾ ಚುನಾವಣೆಯ ಹಿನ್ನೆಲೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನೀಲ್ ಬೋಸ್ ಪರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ಬೃಹತ್ ಸಮಾವೇಶವನ್ನು ಹಮ್ಮಿಕೊಳ್ಳಲಾಗಿತ್ತು.