ಚಿಕ್ಕನಾಯಕನಹಳ್ಳಿ: ಚಿಕ್ಕನಾಯಕನಹಳ್ಳಿ ತಾಲೂಕು ಆಸ್ಪತ್ರೆಯಲ್ಲಿ ಸಿಬ್ಬಂದಿ ನಿರ್ಲಕ್ಷ್ಯ; ತಾವೇ ಬ್ಯಾಂಡೇಜ್ ಹಾಕಿಕೊಂಡ ಅಪಘಾತದ ಗಾಯಾಳುಗಳು
ಚಿಕ್ಕನಾಯಕನಹಳ್ಳಿ ತಾಲೂಕು ಆಸ್ಪತ್ರೆಯಲ್ಲಿ ಸಿಬ್ಬಂದಿ ನಿರ್ಲಕ್ಷ್ಯದ ಆರೋಪ ಕೇಳಿಬಂದಿದೆ. ಚಿಕಿತ್ಸೆಗಾಗಿ ಬಂದ ಅಪಘಾತದ ಗಾಯಾಳುಗಳೇ ಪರಸ್ಪರ ಬ್ಯಾಂಡೇಜ್ ಹಾಕಿಕೊಂಡ ಘಟನೆ ನಡೆದಿದೆ. ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗದಲ್ಲಿ ಸಿಬ್ಬಂದಿ ಇಲ್ಲದ ಕಾರಣ ಈ ಪರಿಸ್ಥಿತಿ ಉಂಟಾಗಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.