ಮುಂಡಗೋಡು: ಖಚಿತ ಮಾಹಿತಿಯ ಮೇರೆಗೆ ಅರಣ್ಯ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ,ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ಸುಮಾರು 60 ಕೆ.ಜಿ ತೂಕದ ಶ್ರೀಗಂಧದ ತುಂಡುಗಳನ್ನು ವಶಪಡಿಸಿಕೊಂಡ ಘಟನೆ ತಾಲೂಕಿನ ಅಗಡಿ ಗ್ರಾಮದಲ್ಲಿ ನಡೆದಿದೆ. ಮುಂಡಗೋಡು ವಲಯ ಅರಣ್ಯ ವ್ಯಾಪ್ತಿಯ ಅಗಡಿ ಗ್ರಾಮದ ನಿವಾಸಿಯಾದ ಪರಶುರಾಮ ಲೋಕಪ್ಪ ಲಮಾಣಿ ಎಂಬುವವರ ಮನೆಯಲ್ಲಿ ಶ್ರೀಗಂಧವನ್ನು ದಾಸ್ತಾನು ಇರಿಸಲಾಗಿದೆ ಎಂಬ ಖಚಿತ ವರ್ತಮಾನದ ಮೇರೆಗೆ ಅರಣ್ಯ ಇಲಾಖೆಯ ಸಿಬ್ಬಂದಿಗಳು ದಾಳಿ ನಡೆಸಿದ್ದರು.