ದೇಶದಲ್ಲಿ ವೋಟ್ ಚೋರಿ ಇಲ್ಲ, ವೋಟ್ ಡಕಾಯತಿ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ವಿಧಾನ ಪರಿಷತ್ ಸದಸ್ಯ ಸಲೀಂ ಅಹ್ಮದ್ ವಾಗ್ದಾಳಿ ನಡೆಸಿದರು. ನಗರದಲ್ಲಿ ಶನಿವಾರ ಸಂಜೆ 5 ಗಂಟೆಗೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮತಗಳ್ಳತನ ವಿರೋಧಿಸಿ ಕಾಂಗ್ರೆಸ್ ನಾಳೆ ದಿಲ್ಲಿಯಲ್ಲಿ ಕೇಂದ್ರ ಸರ್ಕಾರ ಹಾಗೂ ಚುನಾವಣಾ ಆಯೋಗದ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಲಿದೆ ಎಂದು ಹೇಳಿದರು.