ಗುಂಡ್ಲುಪೇಟೆ ಪಟ್ಟಣ ತಹಸೀಲ್ದಾರ್ ಕಚೇರಿಯಲ್ಲಿ ರಾಷ್ಟ್ರೀಯ ಪಲ್ಸ್ ಪೊಲಿಯೋ ಕಾರ್ಯಕ್ರಮದ ಹಿನ್ನಲೆ ತಾಲ್ಲೂಕು ಮಟ್ಟದ ಅಂತರ ಇಲಾಖೆಗಳ ಸಮನ್ವಯ ಸಮಿತಿ ಸಭೆ ತಹಸೀಲ್ದಾರ್ ತನ್ಮಯ್ ಅಧ್ಯಕ್ಷತೆಯಲ್ಲಿ ಗುರುವಾರ ನಡೆಸಲಾಯಿತು. ಈ ವೇಳೆ ತಾಲೂಕು ಆರೋಗ್ಯಾಧಿಕಾರಿ ಡಾ.ಅಲೀಂ ಪಾಷಾ ಮಾತನಾಡಿ, ಡಿ.21 ರಂದು ರಾಷ್ಟ್ರೀಯ ಪಲ್ಸ್ ಪೊಲೀಯೋ ಕಾರ್ಯಕ್ರಮ ನಡೆಯಲಿದೆ. ತಾಲೂಕಿನಲ್ಲಿ 5 ವರ್ಷದೊಳಗಿನ ಒಟ್ಟು 12,404 ಮಕ್ಕಳಿದ್ದು, ಪ್ರತಿಯೊಬ್ಬರಿಗೂ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. ಇದಕ್ಕಾಗಿ ಒಟ್ಟು 152 ಬೂತ್ ಗಳನ್ನು ರಚನೆ ಮಾಡಲಾಗಿದೆ. ಇದರಲ್ಲಿ 620 ವ್ಯಾಕ್ಸಿನೇಟರ್ ಮತ್ತು 12 ಸಂಚಾರಿ ತಂಡಗಳು ಹಾಗೂ 06 ತರಬೇತಿ ಬೂತ್ ಗಳನ್ನು ರಚನೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.