ಹೊಸಪೇಟೆ: ಸುರಕ್ಷಿತ ಗರ್ಭಪಾತದ ಕುರಿತು ಆರೋಗ್ಯ ಇಲಾಖೆಯಿಂದ ಜಾಗೃತಿ
ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಅಂತರರಾಷ್ಟ್ರೀಯ ಸುರಕ್ಷಿತ ಗರ್ಭಪಾತ ದಿನದ ಅಂಗವಾಗಿ ಜಾಗೃತಿ ಕಾರ್ಯಕ್ರಮ ನಡೆಯಿತು. ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಲಿಂಗರಾಜು ಅವರು, ನಕಲಿ ಗಿಡಮೂಲಿಕೆಗಳು ಮತ್ತು ಅನಧಿಕೃತ ವೈದ್ಯರಿಂದ ಗರ್ಭಪಾತ ಮಾಡಿಸಿಕೊಳ್ಳುವುದು ಜೀವಕ್ಕೆ ಅಪಾಯಕಾರಿ ಎಂದು ಎಚ್ಚರಿಸಿದರು.