ಕಲಬುರಗಿ: ವಿ.ಕೆ. ಸಲಗರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ LBA ಪುಸ್ತಕಗಳ ವಿತರಣೆ
ವಿ.ಕೆ. ಸಲಗರ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಇಂದು ವಿದ್ಯಾರ್ಥಿಗಳಿಗೆ LBA ಆಧಾರಿತ ಪುಸ್ತಕಗಳನ್ನು ವಿತರಿಸಲಾಯಿತು. ವಿದ್ಯಾರ್ಥಿಗಳ ಕಲಿಕಾ ಸಾಮರ್ಥ್ಯವನ್ನು ಹೆಚ್ಚಿಸುವುದು, ವಿಷಯಗಳ ಸ್ಪಷ್ಟ ತಿಳುವಳಿಕೆ ಮೂಡಿಸುವುದು ಮತ್ತು ಪರೀಕ್ಷೆಗಳನ್ನು ಆತ್ಮವಿಶ್ವಾಸದಿಂದ ಎದುರಿಸಲು ಸಿದ್ಧಗೊಳಿಸುವುದು ಈ ಉಪಕ್ರಮದ ಉದ್ದೇಶವಾಗಿದೆ.