ಬೆಂಗಳೂರು ಉತ್ತರ: ವಿಧಾನಸೌಧದ ಮುಂಭಾಗದಲ್ಲಿ ಕಿತ್ತೂರು ಉತ್ಸವ -2025ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಬೆಳಗ್ಗೆ ೧೧ ಗಂಟೆಗೆ ವಿಧಾನಸೌಧದದ ಮುಂಭಾಗದಲ್ಲಿ ಕಿತ್ತೂರು ಉತ್ಸವದ ಜ್ಯೋತಿ ಯಾತ್ರೆಗೆ ಚಾಲನೆ ನೀಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಬೆಳಗಾವಿ ಜಿಲ್ಲಾಡಳಿತ ಈ ಕಾರ್ಯಕ್ರಮವನ್ನು ಆಯೋಜಿಸಿತ್ತು. ಬೆಳಗಾವಿ ಉಪ ಆಯುಕ್ತ ರೋಷನ್ ಬೇಗ್ ಸೇರಿದಂತೆ ಇತರ ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಅಂದಹಾಗೆ ಅಕ್ಟೋಬರ್ ೨೩ರಿಂದ ಕಿತ್ತೂರು ಉತ್ಸವ ಅದ್ಧೂರಿಯಾಗಿ ಆರಂಭವಾಗಲಿದೆ.