ದೇವರಹಿಪ್ಪರಗಿ: ರಸ್ತೆ ದುರಸ್ತಿಗಾಗಿ ಬೇಕಿನಾಳ ಗ್ರಾಮಸ್ಥರಿಂದ ರಸ್ತೆ ತಡೆದು ಪ್ರತಿಭಟನೆ
ವಿಜಯಪುರ ಜಿಲ್ಲೆಯ ದೇವರ ಹಿಪ್ಪರಗಿ ತಾಲೂಕಿನ ಬೆಕಿನಾಳ ಗ್ರಾಮದ ರಸ್ತೆ ದುರಸ್ತಿ ಮಾಡಿಕೊಡಬೇಕು ಎಂದು ಆಗ್ರಹಿಸಿ ಮಂಗಳವಾರ ಸಾಯಂಕಾಲ 4ಗಂಟೆ ಸುಮಾರಿಗೆ ಗ್ರಾಮಸ್ಥರು ರಸ್ತೆ ತೆಡೆದು ಪ್ರತಿಭಟನೆ ಮಾಡಿದರು. ಬೇಕಿನಾಳ ಗ್ರಾಮದಿಂದ ತಾಳಿಕೋಟಿ ಪಟ್ಟಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯು ಸಂಪೂರ್ಣವಾಗಿ ಹದಗೆಟ್ಟಿದ್ದು ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ಸಂಚರಿಸಲು ತೊಂದರೆಯಾಗುತ್ತದೆ. ರಸ್ತೆ ನಿರ್ಮಾಣ ಮಾಡಿಕೊಡಬೇಕು ಎಂದು ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಿದರು ಸಹ ಇಲ್ಲಿಯವರೆಗೂ ರಸ್ತೆ ನಿರ್ಮಾಣ ಮಾಡಿಲ್ಲ ಕೂಡವೇ ನಮಗೆ ರಸ್ತೆ ನಿರ್ಮಾಣ ಮಾಡಿಕೊಡಬೇಕು ಎಂದು ಗ್ರಾಮಸ್ಥರು ಪ್ರತಿಭಟಿಸಿದರು.