ಸರ್ಕಾರಿ ಪದವಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿ ಸಂಬಂಧಿತ ಗೊಂದಲವು ಬಗೆಹರಿಯದೆ ತರಗತಿಗಳು ನಡೆಯುತ್ತಿಲ್ಲ. ತರಗತಿಗಳು ನಡೆದು ಪಾಠಗಳು ಸಂಪೂರ್ಣ ಗೊಳ್ಳುವವರೆಗೂ ಪರೀಕ್ಷೆಗಳನ್ನು ನಡೆಸದೇ ಇರುವಂತೆ ಆಗ್ರಹಿಸಿ ಎಐಡಿಎಸ್ಓ ವಿದ್ಯಾರ್ಥಿ ಸಂಘಟನೆಯ ನೂರಾರು ವಿದ್ಯಾರ್ಥಿಗಳು ಹಳೆ ಡಿಸಿ ಕಚೇರಿ ಎದುರು ಪ್ರತಿಭಟನೆ ಮಾಡಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಎಐಡಿಎಸ್ಓ ಜಿಲ್ಲಾ ಅಧ್ಯಕ್ಷೆ ಚಂದ್ರಕಲಾ ಅವರು ಮಾತನಾಡಿ ಇಲ್ಲಿಯವರೆಗೂ ತರಗತಿಗಳು ಸರಿಯಾಗಿ ನಡೆಯದೆ ಇರುವುದರಿಂದ ವಿದ್ಯಾರ್ಥಿಗಳು ಸಾಕಷ್ಟು ಆತಂಕದಲ್ಲಿದ್ದಾರೆ. ಇದು ಅವರ ಶೈಕ್ಷಣಿಕ ಭವಿಷ್ಯವನ್ನು ಅತಂತ್ರವನ್ನಾಗಿಸಿದೆ.