ಮಡಿಕೇರಿ: ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ಸಂಭ್ರಮದ ಆಯುಧ ಪೂಜೆ
ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ಇಂದು ಆಯುಧ ಪೂಜೆಯನ್ನು ಸಡಗರದಿಂದ ಆಚರಿಸಲಾಯಿತು. ಠಾಣಾಧಿಕಾರಿ ಮೋಹನ್ ರಾಜ್ ಮತ್ತು ಸಿಬ್ಬಂದಿ ವರ್ಗದವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ, ಠಾಣೆಯನ್ನು ದೀಪಾಲಂಕಾರದಿಂದ ಸಿಂಗರಿಸಲಾಗಿತ್ತು. ಕಾರ್ಯಕ್ರಮದ ಅಂಗವಾಗಿ ಸಾಮೂಹಿಕ ಊಟದ ವ್ಯವಸ್ಥೆಯನ್ನು ಮಾಡಲಾಗಿತ್ತು.