ಕಾಲೇಜು ಹೋಗುವದಾಗಿ ಹೇಳಿ ಹೋದ 24 ವರ್ಷದ ಇಂಜಿನಿಯರ್ ವಿದ್ಯಾರ್ಥಿನಿ ನಾಪತ್ತೆಯಾಗಿರುವ ಘಟನೆ ಸ್ವಸ್ತಿಕ ನಗರದಲ್ಲಿ ನಡೆದಿದೆ. ಘಟನೆಯಿಂದ ಕುಟುಂಬಸ್ಥರು ಆತಂಕದಲ್ಲಿದ್ದಾರೆ. ಲಕ್ಷ್ಮಿ ಪವಾರ ಕಾಣೆಯಾದ ಇಂಜಿನಿಯರ್ ವಿದ್ಯಾರ್ಥಿನಿಯಾಗಿದ್ದು, ನಗರದ ಶರಣಬಸವೇಶ್ವರ ಇಂಜಿನಿಯರಿಂಗ್ ಕಾಲೇಜಿನಲ್ಲಿ EEE ವಿಭಾಗದಲ್ಲಿ ಅಂತಿಮ ವರ್ಷದ ವ್ಯಾಸಾಂಗ ಮಾಡುತ್ತಿದ್ದರು ಎಂದು ದೂರಿನಲ್ಲಿ ವಿವರಿಸಲಾಗಿದೆ. ವಿದ್ಯಾರ್ಥಿನಿಯ ಮೊಬೈಲ್ ಕೂಡಾ ಸ್ವಿಚ್ ಆಫ್ ಆಗಿದ್ದು ಕುಟುಂಬಸ್ಥರ ಆತಂಕ ಮತ್ತಷ್ಟು ಹೆಚ್ಚಿಸಿದೆ. ಸದ್ಯ ಈ ಕುರಿತು ಪ್ರಕರಣ ದಾಖಲಿಸಿಕೊಂಡ ಎಂಬಿ ನಗರ ಠಾಣೆ ಪೊಲೀಸರು ಪತ್ತೆ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆಂದು ಗುರುವಾರ 11 ಗಂಟೆಗೆ ಮಾಹಿತಿ ಸಿಕ್ಕಿದೆ..