ಉಡುಪಿ: ಸತೀಶ್ ಜಾರಕಿಹೊಳಿ ಮನೆ ಮೇಲಿನ ಇಡಿ ದಾಳಿ: ಬಿಜೆಪಿಯ ರಾಜಕೀಯ ಅಜೆಂಡಾ ಎಂದ ಸಚಿವ ರಿಜ್ವಾನ್ ಅರ್ಷದ್
Udupi, Udupi | Sep 9, 2026 ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸದ ಮೇಲಿನ ಇಡಿ ದಾಳಿಯನ್ನು ಖಂಡಿಸಿ ಸಚಿವ ರಿಜ್ವಾನ್ ಅರ್ಷದ್ ವಾಗ್ದಾಳಿ ನಡೆಸಿದ್ದಾರೆ. ತನಿಖಾ ಸಂಸ್ಥೆಗಳನ್ನು ಬಿಜೆಪಿ ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಆರೋಪಿಸಿರುವ ಅವರು, ಬಳ್ಳಾರಿ ಪಾದಯಾತ್ರೆ ಮತ್ತು ಇಂದಿರಾ ಕಿಟ್ ವಿಚಾರವಾಗಿಯೂ ಪ್ರಮುಖ ಹೇಳಿಕೆಗಳನ್ನು ನೀಡಿದ್ದಾರೆ.