ಖಾಸಾಯಿ ಖಾನೆಗೆ ಅಕ್ರಮವಾಗಿ ಗೋವುಗಳ ಸಾಗಾಟ ಆರೋಪ, ಹಿಂದೂಪರ ಸಂಘಟನೆ ಕಾರ್ಯಕರ್ತರಿಂದ ಗೋವುಗಳ ರಕ್ಷಣೆ ಕಸಾಯಿ ಖಾನೆಗೆಂದು ಕ್ಯಾಂಟರ್ ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 19 ಗೋವುಗಳನ್ನು ಹಿಂದೂಪರ ಸಂಘಟನೆ ಕಾರ್ಯಕರ್ತರು ಇಂದು ಬೆಳಗ್ಗೆ ಎಂಟು ಗಂಟೆ ಸುಮಾರಿಗೆ ದೊಡ್ಡಬಳ್ಳಾಪುರ ತಾಲ್ಲೂಕಿನ ದೊಡ್ಡಬೆಳವಂಗಲ ಹೋಬಳಿಯ ಹುಲಿಕುಂಟೆ ಟೋಲ್ ಬಳಿ ತಡೆದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ಭೇಟಿ ನೀಡಿದ ದೊಡ್ಡಬೆಳವಂಗಲ ಠಾಣೆ ಪೊಲೀಸರು ಟ್ಯಾಂಕರ್ ಸಮೇತ 19 ಗೋವುಗಳನ್ನು ವಶಕ್ಕೆ ಪಡೆದಿದ್ದಾರೆ. ಗೋವುಗಳನ್ನ ಸಾಗಿಸುತ್ತಿದ್ದ ಚಾಲಕ ಸೇರಿ ನಾಲ್ವರನ್ನು ವಶ