ಶಿಕಾರಿಪುರ: ಪಟ್ಟಣದ ಹುಚ್ಚರಾಯಸ್ವಾಮಿ ದೇವಸ್ಥಾನದ ಆವರಣದಲ್ಲಿ ಮತದಾನ ಜಾಗೃತಿ ರಥಕ್ಕೆ ಚಾಲನೆ
ಪಟ್ಟಣದ ಹುಚ್ಚರಾಯಸ್ವಾಮಿ ದೇವಸ್ಥಾನದ ಆವರಣದಲ್ಲಿ ಮತದಾನ ಜಾಗೃತಿ ರಥಕ್ಕೆ ತಾಲೂಕಿನ ಸಹಾಯಕ ಚುನಾವಣೆ ಅಧಿಕಾರಿಗಳಾದ ರವಿ ಬಂಗಾರಪ್ಪ ಸೋಮವಾರ ಮದ್ಯಾಹ್ನ 3 ಗಂಟೆಗೆ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. ಶಿಕಾರಿಪುರ ವಿಧಾನಸಭಾ ಕ್ಷೇತ್ರದಲ್ಲಿ ಶೇಕಡ ನೂರರಷ್ಟು ಮತದಾನ ಮಾಡುವ ಮೂಲಕ ರಾಜ್ಯದಲ್ಲಿಯೇ ಅತಿ ಹೆಚ್ಚು ಮತದಾನ ನಡೆದ ತಾಲ್ಲೂಕು ಎಂಬ ಹೆಗ್ಗಳಿಕೆಗೆ ಪಾತ್ರರಾಗಬೇಕು ಎಂದು ಕರೆ ನೀಡಿದರು. ಈ ವಾಹನದಲ್ಲಿ ಚುನಾವಣಾ ಆಯೋಗದ ಎಲ್ಲಾ ರೀತಿಯ ಆಪ್ ಗಳನ್ನ ಅಳವಡಿಸಲಾಗಿದ್ದು ಸಾರ್ವಜನಿಕರು ಡೌನ್ಲೋಡ್ ಮಾಡಿಕೊಂಡು ಚುನಾವಣೆಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಯನ್ನು ಪಡೆಯಬಹುದು ಎಂದರು. ಈ ಸಂದರ್ಭದಲ್ಲಿ ತಹಸಿಲ್ದಾರ್ ಮಲ್ಲೇಶ್ ಬೀರಪ್ಪ ಇದ್ದರು