ಚನ್ನರಾಯಪಟ್ಟಣ: ಪಟ್ಟಣದಲ್ಲಿ ಹೆಚ್ಚುವರಿ ಪ್ರವಾಸಿ ಮಂದಿರದ ಕಟ್ಟಡ ಉದ್ಘಾಟಿಸಿದ ಸಚಿವ ಕೆ. ಎನ್ ರಾಜಣ್ಣ
ಹಾಸನ: ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ದಲ್ಲಿ ನೂತನವಾಗಿ ನಿರ್ಮಾಣ ಮಾಡಿರುವ ಪ್ರವಾಸಿ ಮಂದಿರದ ಹೆಚ್ಚುವರಿ ಕಟ್ಟಡವನ್ನು ಇಂದು ಬೆಳಗ್ಗೆ ಸಹಕಾರಿ ಸಚಿವರು ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ಎನ್ ರಾಜಣ್ಣ ಉದ್ಘಾಟಿಸಿದರು.ಸಚಿವರೊಂದಿಗೆ ಸ್ಥಳೀಯ ಶಾಸಕರಾದ ಸಿ. ಎನ್ ಬಾಲಕೃಷ್ಣ, ಜಿಲ್ಲಾಧಿಕಾರಿ ಕೆ.ಎಸ್ ಲತಾಕುಮಾರಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಆರ್ ಪೂರ್ಣಿಮಾ, ಎಸ್ಪಿ ಮೊಹಮ್ಮದ್ ಸುಜಿತಾ, ಉಪವಿಭಾಗಾಧಿಕಾರಿಗಳಾದ ಮಾರುತಿ, ಶೃತಿ, ಹಾಗೂ ತಸೀಲ್ದಾರರು ಹಾಗೂ ಇತರ ಅಧಿಕಾರಿಗಳು ಜೊತೆಗಿದ್ದರು.