ಪಾವಗಡ: ದಲಿತರ ಮೇಲಿನ ದೌರ್ಜನ್ಯವನ್ನು ಖಂಡಿಸಿ ಸೆಪ್ಟೆಂಬರ್ 24 ರಂದು ಮಧುಗಿರಿಯಲ್ಲಿ ಬೃಹತ್ ಪ್ರತಿಭಟನೆ
ದಿನೇ ದಿನೇ ತುಮಕೂರು ಜಿಲ್ಲೆಯಲ್ಲಿ ದಲಿತರ ಮತ್ತು ಶೋಷಿತ ವರ್ಗಗಳ ಮೇಲೆ ಸವರ್ಣಿಯರ ದೌರ್ಜನ್ಯ ಮತ್ತು ಹಲ್ಲೆ ಪ್ರಕರಣಗಳು ಹೆಚ್ಚಾಗುತ್ತಿರುವುದನ್ನು ಖಂಡಿಸಿ ಮಧುಗಿರಿಯಲ್ಲಿ ಸೆಪ್ಟೆಂಬರ್ 24 ರಂದು ಬೃಹತ್ ಪ್ರತಿಭಟನೆಯನ್ನು ದಲಿತ ಸಂಘಟನೆಗಳು ಪಕ್ಷಾತೀತವಾಗಿ ನಡೆಸಲಿದ್ದೇವೆ ಎಂದು ಕರ್ನಾಟಕ ರಾಜ್ಯ ದಲಿತ ಮೀಸಲಾತಿ ಹೋರಾಟ ಸಮಿತಿಯ ರಾಜ್ಯಾಧ್ಯಕ್ಷ ಕೇಶವಮೂರ್ತಿ ತಿಳಿಸಿದರು ಈ ಸಂಬಂಧ ಸೋಮವಾರ ಮಧ್ಯಾನ 4 ಗಂಟೆಯಲ್ಲಿ ಪಟ್ಟಣದ ನಿರೀಕ್ಷಣಾ ಮಂದಿರದಲ್ಲಿ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಕಳೆದ ಮೂರು ದಿನಗಳ ಹಿಂದೆ ಪಾವಗಡ ತಾಲೂಕಿನ ಬೆಳ್ಳಿಬಟ್ಲು ಗ್ರಾಮದಲ್ಲಿ ಹನುಮಂತಪ್ಪನ್ನುವವರ ಮೇಲೆ ವಾಲ್ಮೀಕಿ ಎನ್ನುವ ಯುವಕ ದೊಣ್ಣೆಯಿಂದ ಹಲ್ಲೆಗೊಳಿಸಿ ಕೊಲೆ ಮಾಡಿದ್ದಾನೆ, ಒಂದು ವಾರದ