ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರ ಹಾಗೂ ಪ್ರವಾಸೋದ್ಯಮ ಇಲಾಖೆ ಹಾಗೂ ಜಿಲ್ಲಾಡಳಿತ ಬೆಳಗಾವಿ ನೇತೃತ್ವದಲ್ಲಿ ಬೆಳಗಾವಿಯಲ್ಲಿ ಪ್ರಪ್ರಥಮ ಬಾರಿಗೆ ಬೃಹತ್ ಮಟ್ಟದಲ್ಲಿ ವಸ್ತು ಪ್ರದರ್ಶನ ಆಯೋಜನೆ ಮಾಡಲಾಗಿದ್ದು ಇಂದಿನಿಂದ 43 ದಿನಗಳ ಕಾಲ ನಡೆಯುವ ವಸ್ತು ಪ್ರದರ್ಶನ ಆಗಿದ್ದು ಮೊಟ್ಟ ಮೊದಲ ಬಾರಿಗೆ ಬೆಳಗಾವಿಯಲ್ಲಿ ನಡೆಯುತ್ತಿರುವ ಇಂತಹ ದೊಡ್ಡ ಮಟ್ಟದ ವಸ್ತು ಪ್ರದರ್ಶನ ಕಾರ್ಯಕ್ರಮಕ್ಕೆ ಇಂದು ರವಿವಾರ 8 ಗಂಟೆಗೆ ಸಚಿವ ಸತೀಶ ಜಾರಕಿಹೊಳಿ ಹಾಗೂ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಆಯೂಬ್ ಖಾನ ಹಾಗೂ ಶಾಸಕ ಆಶೀಪ್ ಸೇಠ್ ಅವರ ನೇತೃತ್ವದಲ್ಲಿ ಚಾಲನೆ ನೀಡಲಾಯಿತು ಈ ಕಾರ್ಯಕ್ರಮ ಬೆಳಗಾವಿ ನಗರದ ಸಿಪಿಎಡ್ ಮೈದಾನದಲ್ಲಿ ನಡೆಯುತ್ತಿದ್ದು ವಿವಿಧ ರೀತಿಯ ಅಂಗಡಿ ಮುಗ್ಗಟ್ಟುಗಳಿವೆ.