ಲಿಂಗಸೂರು: ಮುದುಗಲ್ : ಆಟೋ ಪಲ್ಟಿ 5 ವರ್ಷದ ಬಾಲಕಿ ಸಾವು
ಛತ್ರ ಗ್ರಾಮದ ಮಾರುತೇಶ್ವರ ದೇವಸ್ಥಾನಕ್ಕೆ ಹೋಗಿ ವಾಪಸ್ ಬರುತ್ತಿದ್ದಾಗ ಆಟೋ ಚಾಲಕ ನಿಯಂತ್ರಣ ತಪ್ಪಿದ ಆಟೋ ಪಲ್ಟಿಯಾಗಿ ಬಿದ್ದು 5 ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ನಡೆದಿದೆ. ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಮುದಗಲ್ ನಲ್ಲಿ ಅಪಘಾತ ಜರುಗಿದೆ. ಅನುಶ್ರೀ (5) ಮೃತ ದುರ್ದೈವಿ ಬಾಲಕಿ. ಘಟನೆಯಲ್ಲಿ ಮೂವರು ಗಾಯಗೊಂಡಿದ್ದಾರೆ. ಮೃತ ಬಾಲಕಿ ಯರಗುಂಟಾ ಗ್ರಾಮದ ನಿವಾಸಿ ಎಂದು ತಿಳಿದುಬಂದಿದೆ. ಮುದುಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.