ಸಿದ್ಧಾಪುರ: ಶಿರಸಿ: ಕರ್ನಾಟಕ ಸಾಹಿತ್ಯ ಅಕಾಡೆಮಿಯ ಯುವ ಕವಿಗೋಷ್ಠಿಗೆ ಸಿದ್ದಾಪುರದ ಯಶಸ್ವಿನಿ ಶ್ರೀಧರ ಮೂರ್ತಿ ಆಯ್ಕೆ
ಶಿರಸಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕರ್ನಾಟಕ ಸಾಹಿತ್ಯ ಅಕಾಡೆಮಿ ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲ್ಪಟ್ಟಿರುವ ಪ್ರತಿಷ್ಠಿತ ಯುವ ಕವಿಗೋಷ್ಠಿಗೆ ಕಾನಸೂರಿನ ಕಾಳಿಕಾ ಭವಾನಿ ಪ್ರೌಢಶಾಲೆಯ ಗಣಿತ ಶಿಕ್ಷಕಿ ಯಶಸ್ವಿನಿ ಶ್ರೀಧರ ಮೂರ್ತಿ ಆಯ್ಕೆಯಾಗಿದ್ದಾರೆ. ಬೆಳಗಾವಿ ವಲಯದ 7 ಜಿಲ್ಲೆಗಳಿಂದ ಕವಿಗಳನ್ನು ಆಯ್ಕೆ ಮಾಡಲಾಗಿದ್ದು 23 ಕವಿಗಳು ಭಾಗ ವಹಿಸಲಿದ್ದಾರೆ. ಯುವ ಕವಿಗೋಷ್ಠಿಯು ಜುಲೈ 21 ರಂದು ಬೆಳಗಾವಿಯ ಕನ್ನಡ ಭವನದಲ್ಲಿ ಜರುಗಲಿದೆ. ಉತ್ತರ ಕನ್ನಡ ಜಿಲ್ಲೆಯಿಂದ ಮಾಲತಿ ಭಟ್ ಹಾಗೂ ರವಿ ಕಂಬಳಿ ಸಹ ಆಯ್ಕೆಯಾಗಿದ್ದಾರೆ. ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎಲ್. ಎನ್. ಮುಕುಂದ ರಾಜ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.