ರಾಯಚೂರು: ಜಿಲ್ಲೆಯಾದ್ಯಂತ ನಕಲಿ ವೈದ್ಯರ 120ಕ್ಕೂ ಹೆಚ್ಚು ಕ್ಲಿನಿಕ್ ಗಳ ಸೀಜ್, ನಗರದಲ್ಲಿ ಡಿಎಚ್ಒ ಡಾ.ಸುರೇಂದ್ರಬಾಬು ಹೇಳಿಕೆ
ರಾಯಚೂರು ಜಿಲ್ಲೆಯ ಜನತಾ ನಕಲಿ ವೈದ್ಯರ 120ಕ್ಕೂ ಹೆಚ್ಚು ಕ್ಲಿನಿಕ್ ಗಳನ್ನು ಸೀಸ್ ಮಾಡಲಾಗಿದೆ ಎಂದು ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಸುರೇಂದ್ರಬಾಬು ತಿಳಿಸಿದ್ದಾರೆ. ಬುಧವಾರ ಮಧ್ಯಾಹ್ನ ರಾಯಚೂರು ನಗರದಲ್ಲಿ ಈ ಕುರಿತು ವಿವರಣೆ ನೀಡಿ, ಈಗಾಗಲೇ ನಕಲಿ ವೈದ್ಯರ ಪಟ್ಟಿಯನ್ನು ಸಿದ್ಧಪಡಿಸಿದ್ದು, ಅದರ ಆಧಾರದಲ್ಲಿ ಕ್ಲಿನಿಕ್ ಗಳನ್ನು ಮುಚ್ಚಿಸಲಾಗುತ್ತಿದೆ. ವಿದ್ಯಾರ್ಹತೆ ಇಲ್ಲದವರು ಹಾಗೂ ಕೆಪಿಎಂಇ ಕಾಯ್ದೆ ಅಡಿ ನೋಂದಣಿ ಮಾಡಿಕೊಳ್ಳದವರ ಕ್ಲಿನಿಕ್ ಗಳಿಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.