ತರೀಕೆರೆ: ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ.! ಪಟ್ಟಣದಲ್ಲಿ ಸುಟ್ಟು ಬೂದಿಯಾದ 50 ಲಕ್ಷಕ್ಕೂ ಹೆಚ್ಚು ಮೌಲ್ಯದ ವಸ್ತುಗಳು.!
ಶಾರ್ಟ್ ಸರ್ಕ್ಯೂಟ್ನಿಂದಾಗಿ ಎಲೆಕ್ಟ್ರಾನಿಕ್ ಅಂಗಡಿಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು. 50 ಲಕ್ಷಕ್ಕೂ ಅಧಿಲ ಮೌಲ್ಯದ ವಸ್ತುಗಳು ಸುಟ್ಟು ಬೂದಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಪಟ್ಟಣದಲ್ಲಿ ನಡೆದಿದೆ. ತರೀಕೆರೆ ಪಟ್ಟಣದ ಬಿ.ಹೆಚ್ ರಸ್ತೆಯಲ್ಲಿರುವ ರಾಮ್ ದೇವ್ ಎಲೆಕ್ಟ್ರಾನಿಕ್ಸ್ ಅಂಗಡಿಯಲ್ಲಿ ತಡರಾತ್ರಿ ಬೆಂಕಿ ಕಾಣಿಸಿಕೊಂಡಿದ್ದು, ಅಂಗಡಿಯಲ್ಲಿದ್ದ 50 ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳು ಸುಟ್ಟು ಬೂದಿಯಾಗಿದ್ದು ಬೆಂಕಿ ನದಿಸುವಲ್ಲಿ ಅಗ್ನಿ ಶಾಮಕ ದಳದ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.