ಬೆಂಗಳೂರಿನ ಆರೋಗ್ಯ ಸೌಧದಲ್ಲಿ ಹೆಣ್ಣು ಮಕ್ಕಳ ದಿನಾಚರಣೆಯನ್ನು ಆಕಾಶಕ್ಕೆ ಪಿಂಕ್ ಬಲೂನ್ ಹಾರಿಸುವ ಮೂಲಕ ಆಚರಿಸಲಾಯಿತು. ಈ ಸಂದರ್ಭದಲ್ಲಿ, ಭ್ರೂಣ ಹತ್ಯೆ ಮಾಫಿಯಾ ಬಗ್ಗೆ ಮಾಹಿತಿ ನೀಡುವ ಸಾರ್ವಜನಿಕರಿಗೆ ಬಹುಮಾನ ಘೋಷಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. ಮಾಹಿತಿ ನೀಡಿದವರಿಗೆ ನಗದು ಬಹುಮಾನ ನೀಡಲಾಗುವುದು ಎಂದು ಅವರು ಹೇಳಿದರು.