ಶಿವಮೊಗ್ಗ: ನಗರದ ಕೋಟೆ ಶ್ರೀ ಸೀತಾ ರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಜಿಲ್ಲಾ ಬಿಜೆಪಿಯಿಂದ ವಿಶೇಷ ಪೂಜೆ
ಜಿಲ್ಲಾ ಬಿಜೆಪಿ ಮುಖಂಡರು ಶಿವಮೊಗ್ಗದ ದುರ್ವಾಸ ಕ್ಷೇತ್ರ ಕೋಟೆ ಸೀತಾರಾಮ ಆಂಜನೇಯ ಸ್ವಾಮಿಯ ದೇವಾಲಯಕ್ಕೆ ಭೇಟಿ ನೀಡಿ, ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಅವರ ಗೆಲುವಿಗಾಗಿ ಪ್ರಾರ್ಥಿಸಿ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಶಿವಮೊಗ್ಗ ನಗರ ಶಾಸಕ ಎಸ್ ಎನ್ ಚನ್ನಬಸಪ್ಪ, ವಿಧಾನ ಪರಿಷತ್ ಸದಸ್ಯರಾದ ಡಿಎಸ್ ಅರುಣ್, ಬಿಜೆಪಿ ಜಿಲ್ಲಾಧ್ಯಕ್ಷರಾದ ಟಿ.ಡಿ ಮೇಘರಾಜ್, ನಗರಾಧ್ಯಕ್ಷರಾದ ಮೋಹನ್ ರೆಡ್ಡಿ, ರಾಜ್ಯ ಪ್ರಕೋಷ್ಟಗಳ ಸಂಯೋಜಕರಾದ ಎಸ್.ದತ್ತಾತ್ರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಹರಿಕೃಷ್ಣ, ಮಹಾನಗರ ಪಾಲಿಕೆಯ ಮಾಜಿ ಸದಸ್ಯರಾದ ಪ್ರಭಾಕರ್.ಪಿ ಸೇರಿದಂತೆ ಬಿಜೆಪಿಯ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.