ಬೆಂಗಳೂರು ಉತ್ತರ: ಮುಖ್ಯ ರಸ್ತೆಗಳಿಗೆ ಡಾಂಬರೀಕರಣ ಕಾರ್ಯ ಕೈಗೊಳ್ಳಲಾಗಿದೆ: ನಗರದಲ್ಲಿ ರಾಜೇಂದ್ರ ಚೋಳನ್
ಸನ್ಮಾನ್ಯ ಮುಖ್ಯಮಂತ್ರಿಗಳ ಆದೇಶ ಹಾಗೂ ಮಾನ್ಯ ಉಪಮುಖ್ಯಮಂತ್ರಿಗಳು ನೀಡಿದ ಸೂಚನೆಯಂತೆ ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಥಮ ಆದ್ಯತೆ ಮೇಲೆ ರಸ್ತೆ ಗುಂಡಿಗಳನ್ನು ಮುಚ್ಚುವುದು, ಪ್ರಮುಖ ರಸ್ತಗೆಗಳಿಗೆ ಡಾಂಬರೀಕರಣ, ಸಿ.ಸಿ. ರಸ್ತೆ ನಿರ್ಮಾಣ ಮಾಡುವ ಮೂಲಕ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ವೇಗ ನೀಡಲಾಗಿದೆ ಎಂದು ಕೇಂದ್ರ ನಗರ ಪಾಲಿಕೆ ಆಯುಕ್ತರಾದ ರಾಜೇಂದ್ರ ಚೋಳನ್ ರವರು ತಿಳಿಸಿದರು. ನಗರದ ಟೌನ್ ಹಾಲ್ ಮುಂಭಾಗದ ರಸ್ತೆಯಲ್ಲಿ ಶನಿವಾರ ಮಧ್ಯಾಹ್ನ 3 ಗಂಟೆ ಯಿಂದ ರಾತ್ರಿ 8 ಗಂಟೆವರೆಗೂ ರಸ್ತೆ ಡಾಂಬರೀಕರಣ ಕಾಮಗಾರಿ ನಡೆದಿದ್ದು, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು ಉತ್ತಮ ಗುಣಮಟ್ಟ ಕಾಯ್ದುಕೊಂಡು ಕಾಮಗಾರಿ ನಿರ್ವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.