ವೈದ್ಯಕೀಯ ಶಿಕ್ಷಣ ಇಲಾಖೆಯ ವತಿಯಿಂದ ಇಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಸಾವಿರ ಹಾಸಿಗೆಗಳ ಚಾರಿಟೇಬಲ್ ಸೂಪರ್ ಸ್ಪೆಷಾಲಿಟಿ ಹಾಗೂ ಮಾನವ ಬಹು ಅಂಗಾಂಗ ಕಸಿ ಆಸ್ಪತ್ರೆಯ ನಿರ್ಮಾಣ ಮತ್ತು ನಿರ್ವಹಣೆ ಸಂಬಂಧ ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ ಅಜೀಂ ಪ್ರೇಮ್‌ಜಿ ಫೌಂಡೇಶನ್ ನಡುವಿನ ಒಡಂಬಡಿಕೆಗೆ ಸಹಿ ಹಾಕಲಾಯಿತು.