ಸಿದ್ಧಾಪುರ: ತಾಲ್ಲೂಕಿನ ವಿವಿಧ ಪ್ರದೇಶಗಳಿಗೆ ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಭೇಟಿ, ಪರಿಶೀಲನೆ
ಸಿದ್ದಾಪುರ : ಕರ್ನಾಟಕ ಸರ್ಕಾರದ ಲೋಕೋಪಯೋಗಿ ಇಲಾಖೆ ಸಚಿವರಾದ ಸತೀಶ ಜಾರಕಿಹೊಳಿ ಅವರು ಇಂದು ಗುರುವಾರ ಸಂಜೆ 5.30 ಗಂಟೆ ಸುಮಾರಿಗೆ ತಾಲೂಕಿನ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಚಿವ ಸತೀಶ ಜಾರಕಿಹೊಳಿಯವರು ಸಾಗರಕ್ಕೆ ತೆರಳುವ ಮಾರ್ಗ ಮಧ್ಯೆ ಸ್ಥಳೀಯ ಶಾಸಕರಾದ ಭೀಮಣ್ಣ ನಾಯ್ಕರ ಒತ್ತಾಯದ ಮೇರೆಗೆ ತಾಲೂಕಿನ ಪ್ರಮುಖ ಸ್ಥಳಗಳಿಗೆ ಭೇಟಿ ನೀಡಿ ವೀಕ್ಷಣೆ ಮಾಡಿದರು. ತಾಲೂಕಿನ ಹಳದೋಟ ಸೇತುವೆ, ಹುಸೂರ ಡ್ಯಾಮ್ ಹಾಗೂ ಜೋಗಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಶಾಸಕ ಭೀಮಣ್ಣ ನಾಯ್ಕ ಸಚಿವರ ಜೊತೆಗಿದ್ದು ಸಿದ್ದಾಪುರ ತಾಲೂಕಿಗೆ ಅಗತ್ಯ ಅನುದಾನ ನೀಡುವಂತೆ ಮನವಿ ಮಾಡಿದರು.